ನವದೆಹಲಿ: ನೀಟ್-ಯುಜಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಡೀ ಶಿಕ್ಷಣ ವ್ಯವಸ್ಥೆಯನ್ನು ಮೋದಿ ಮಾಫಿಯಾಗೆ ಒಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್–ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಆದರೆ ನೀಟ್–ಪಿಜಿ, ಯುಜಿಸಿ–ನೆಟ್ ಮತ್ತು ಸಿಎಸ್‌ಐಆರ್–ನೆಟ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ದೇಶದ ಕೆಲವು ಮುಖ್ಯ ಪರೀಕ್ಷೆಗಳ ಸ್ಥಿತಿ ಇದು. ಬಿಜೆಪಿಯ ಆಡಳಿತದಲ್ಲಿ, ಇಡೀ ಶಿಕ್ಷಣ ವ್ಯವಸ್ಥೆಯನ್ನು ಮಾಫಿಯಾ ಮತ್ತು ಭ್ರಷ್ಟರಿಗೆ ವಹಿಸಲಾಗಿದೆ ಎಂದಿದ್ದಾರೆ.
ದೇಶದ ಶಿಕ್ಷಣ ಮತ್ತು ಮಕ್ಕಳ ಭವಿಷ್ಯವನ್ನು ದುರಂಹಕಾರಿ ಮತ್ತು ಅಸಮರ್ಥ ರಾಜಕಾರಣಿಗಳ ಕೈಗೆ ನೀಡಿರುವುದರಿಂದ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು, ಕ್ಯಾಂಪಸ್‌ಗಳಿಂದ ಶಿಕ್ಷಣ ಕಣ್ಮರೆಯಾಗುತ್ತಿರುವುದಕ್ಕೆ ಕಾರಣವಾಗಿದೆ. ಇವು ಇಂದಿನ ನಮ್ಮ ಶಿಕ್ಷಣ ವ್ಯವಸ್ಥೆಯ ಗುರುತಾಗಿದೆ ಎಂದು ಹೇಳಿದ್ದಾರೆ.
ಇಂದು ಬಿಜೆಪಿ ಸರ್ಕಾರ ಯುವಜನರ ಭವಿಷ್ಯಕ್ಕೆ ದೊಡ್ಡ ತೊಡಕಾಗಿದೆ. ದೇಶದ ಸಮರ್ಥ ಯುವಕರು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಹೋರಾಡಲು ತಮ್ಮ ಅಮೂಲ್ಯ ಸಮಯ ಮತ್ತು ಶಕ್ತಿಯನ್ನು ವ್ಯರ್ಥ ಮಾಡುತ್ತಿದ್ದಾರೆ. ಅಸಹಾಯಕ ಮೋದಿ ಕೇವಲ ಪ್ರೇಕ್ಷಕರಾಗಿದ್ದಾರೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.