ADVERTISEMENT

ಊಟಿ ಬಳಿ ಕಣಿವೆಗೆ ಉರುಳಿದ ಪ್ರವಾಸಿಗರ ಬಸ್: 8 ಜನ ಸಾವು

ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ಘಟನೆ

ಐಎಎನ್ಎಸ್
Published 1 ಅಕ್ಟೋಬರ್ 2023, 3:24 IST
Last Updated 1 ಅಕ್ಟೋಬರ್ 2023, 3:24 IST
   

ಉದಕಮಂಡಲಂ: ಪ್ರವಾಸಿಗರ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಪ್ರವಾಸಿಗರು ಮೃತಪಟ್ಟು 42 ಜನ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ–ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ.

ಮೃತರಲ್ಲಿ ಬಹುತೇಕರು ತಮಿಳುನಾಡಿನ ತೆಂಕಾಸಿಯ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕೂನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿದ್ದ ಬಸ್, 9 ನೇ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು 50 ಅಡಿ ಆಳವಾದ ಕಣಿವೆಗೆ ಉರುಳಿ ಬಿದ್ದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

ADVERTISEMENT

ಬಸ್‌ನಲ್ಲಿ 57 ಪ್ರವಾಸಿಗರು ಇದ್ದರು, ಇವರೆಲ್ಲ ಮೆಟ್ಟುಪಾಳ್ಯಂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಿಕೊಂಡು ವಾಪಸ್ ಊಟಿಗೆ ಬರುವಾಗ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ನ ಬ್ರೇಕ್ ಫೇಲಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಸಂತಾಪ ಸೂಚಿಸಿ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.