ಮುಂಬೈ: ನಿಮ್ಮ ಸಂಪರ್ಕದಲ್ಲಿರುವ ಒಬ್ಬ ಬಂಡಾಯ ಶಾಸಕನನ್ನು ಹೆಸರಿಸಿ ಎಂದು ಶಿವಸೇನಾ ಮುಖ್ಯಸ್ಥ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪಕ್ಷದ ಬಂಡಾಯ ನಾಯಕ ಏಕನಾಥ ಶಿಂಧೆ ಸವಾಲು ಹಾಕಿದ್ದಾರೆ.
‘ಅವರು (ಉದ್ಧವ್) ತಪ್ಪು ಮಾಹಿತಿ ಹರಡಿ ಜನರನ್ನು ದಾರಿತಪ್ಪಿಸಲು ಯತ್ನಿಸುತ್ತಿದ್ದಾರೆ’ ಎಂದು ಗುವಾಹಟಿಯ ಹೋಟೆಲ್‌ನಲ್ಲಿರುವ ಶಿಂಧೆ ದೂರಿದ್ದಾರೆ.
ಗುವಾಹಟಿಯ ಹೋಟೆಲ್‌ನಲ್ಲಿರುವ ಬಂಡಾಯ ಶಾಸಕರ ಪೈಕಿ ಕೆಲವರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಹಾಗೂ ಸಂಜಯ್ ರಾವುತ್ ಹೇಳುತ್ತಿದ್ದಾರೆ. ಇದಕ್ಕೆ ಶಿಂಧೆ ತಿರುಗೇಟು ನೀಡಿದ್ದಾರೆ.
‘ನಾವು ಶಿವ ಸೈನಿಕರು. ನಾವು ಬಾಳಾಸಾಹೇಬ್ ಠಾಕ್ರೆ ಅನುಯಾಯಿಗಳು. ಹಿಂದುತ್ವವನ್ನು ಮುಂದಕ್ಕೊಯ್ಯಲಿದ್ದೇವೆ’ ಎಂದು ಶಿಂಧೆ ಪುನರುಚ್ಚರಿಸಿದ್ದಾರೆ. 50 ಶಾಸಕರು ಅವರ ಜತೆಗಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ, 16 ಶಾಸಕರ ಅನರ್ಹತೆ ಪ್ರಕ್ರಿಯೆಯನ್ನು ಸುಪ್ರೀಂ ಕೋರ್ಟ್ ಅಮಾನತಿನಲ್ಲಿಟ್ಟಿರುವುದು ಬಂಡಾಯ ಶಾಸಕರನ್ನು ನಿರಾಳರನ್ನಾಗಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.