ADVERTISEMENT

ಲೋಕಸಭೆ ಚುನಾವಣೆ 2019: ಮೊದಲ ಹಂತದ 91 ಕ್ಷೇತ್ರಗಳಿಗೆ ಮತದಾನ ಆರಂಭ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 1:43 IST
Last Updated 11 ಏಪ್ರಿಲ್ 2019, 1:43 IST
ಆಂಧ್ರದ ಪುಲಿವೆಂದಲ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಮಾಡಲು ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದರು. 
ಆಂಧ್ರದ ಪುಲಿವೆಂದಲ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಮಾಡಲು ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದರು.    

ನವದೆಹಲಿ:ಲೋಕಸಭೆಯ ಮೊದಲ ಹಂತದ ಮತದಾನ ಗುರುವಾರ ಬೆಳಗ್ಗೆ 7 ಗಂಟೆಗೆ ಆರಂಭವಾಯಿತು. ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.

ಮಹಾರಾಷ್ಟ್ರದ ನಾಗಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 255ನೇ ವಾರ್ಡ್‌ನಲ್ಲಿ ಸಾರ್ವಜನಿಕರೊಬ್ಬರು ಮತದಾನ ಮಾಡಿದರು. ಇಲ್ಲಿನ 256ನೇ ವಾರ್ಡ್‌ನಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್ ಮತದಾನ ಮಾಡಿದರು.

ಮೊದಲಹಂತದಲ್ಲಿ 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳಲ್ಲಿ ಭದ್ರತೆ ಕಲ್ಪಿಸಲಾಗಿದೆ.

ADVERTISEMENT

ಮೊದಲ ಹಂತದ ಮತದಾನಕ್ಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸಜ್ಜಾಗಿವೆ.ಆಂಧ್ರಪ್ರದೇಶ ವಿಧಾನಸಭೆಯ 175 ಕ್ಷೇತ್ರ, 25 ಲೋಕಸಭಾ ಕ್ಷೇತ್ರ ಹಾಗೂ ತೆಲಂಗಾಣದ 17 ಲೋಕಸಭಾ‌ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಲಿದೆ.

ಅಸ್ಸಾಂನ ಗುವಾಹಟಿ ಹಾಗೂ ಆಂಧ್ರದ ಪುಲಿವೆಂದಲ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆಯಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಮಾಡಲು ಸಾರ್ವಜನಿಕರು ಸಾಲುಗಟ್ಟಿ ನಿಂತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.