ಪುದುಚೇರಿ: ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಿದ್ಧಾಂತವು ವಿಷಕಾರಿಯಾಗಿದ್ದು, ಜನರು ಅದನ್ನು ತಮಿಳುನಾಡು ಮತ್ತು ಪುದುಚೇರಿಯೊಳಗೆ ಪ್ರವೇಶಿಸಲು ಬಿಡಬಾರದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷಕ್ಕೆ ಸಮಾನವಾಗಿದ್ದು, ನೀವು ಅವುಗಳ ರುಚಿ ನೋಡಿದರೆ ಸಾಯುತ್ತೀರಿ. ಹೇಗೋಮಾಡಿ ಅವರು ಕರ್ನಾಟಕವನ್ನು ತಲುಪಿದ್ದಾರೆ. ಆ ವಿಷಕಾರಿ ಸಿದ್ಧಾಂತವು ತಮಿಳುನಾಡು ಮತ್ತು ಪುದುಚೇರಿ ಪ್ರವೇಶಿಸಲು ಅನುಮತಿಸಬಾರದು ಎಂದು ಹೇಳಿದ್ದಾರೆ.
ಪುದುಚೇರಿ ವಿಧಾನಸಭೆಯ ಒಟ್ಟು 30 ಸ್ಥಾನಗಳಿಗೆ ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಐದು ಸ್ಥಾನಗಳನ್ನು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಪುದುಚೇರಿಯ ಒಟ್ಟು 10,02,589 ಮತದಾರರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ.
ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಅಖಾಡಕ್ಕಿಳಿದಿದೆ. ಅತ್ತ ಪ್ರತಿಪಕ್ಷಗಳ ಒಕ್ಕೂಟ ಅಖಿಲ ಭಾರತ ಎನ್‌ಆರ್ ಕಾಂಗ್ರೆಸ್, ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.