ಕೋಲ್ಕತ್ತ (ಪಿಟಿಐ): ‘ರಾಜ್ಯಗಳಲ್ಲಿನ ರಾಜಕೀಯ ಸ್ಥಿತಿಗತಿ ವಿಭಿನ್ನವಾಗಿರುವುದಿಂದ ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಜತೆಗಿನ ಸ್ಥಾನ ಹೊಂದಾಣಿಕೆಯ ಮಾತುಕತೆ ಆಯಾ ರಾಜ್ಯ ಮಟ್ಟದಲ್ಲಿಯೇ ನಡೆಯಲಿದೆ’ ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಸೋಲಿಸಲು ಸಿಪಿಎಂ ರಾಜ್ಯ ನಾಯಕತ್ವ ಕಾಂಗ್ರೆಸ್ ಜತೆಗೆ ಚುನಾವಣಾ ಮೈತ್ರಿಗೆ ಒಲವು ವ್ಯಕ್ತಪಡಿಸಿದ ಬೆನ್ನಲ್ಲೇ ಯೆಚೂರಿ ಈ ಹೇಳಿಕೆ ನೀಡಿದ್ದಾರೆ.
‘ಸಮಾಜವಾದಿ ಪಾರ್ಟಿ ಹಾಗೂ ಬಹುಜನ ಸಮಾಜ ಪಾರ್ಟಿ ಮೈತ್ರಿ ಸಕಾರಾತ್ಮಕ ಬೆಳವಣಿಗೆಯಾಗಿದೆ. ಚುನಾವಣೆ ನಂತರ ಕೇಂದ್ರದಲ್ಲಿ ಬಿಜೆಪಿ ವಿರೋಧಿ ಜಾತ್ಯತೀತ ಹಾಗೂ ಪ್ರಜಾಸತ್ತಾತ್ಮಕ ಒಕ್ಕೂಟದ ಅಧಿಕಾರವನ್ನು ನಿರೀಕ್ಷಿಸಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.
ಲೋಕಸಭೆ ಚುನಾವಣೆಗಾಗಿ ಪಶ್ಚಿಮ ಬಂಗಾಳದಲ್ಲಿ ಸ್ಥಾನ ಹೊಂದಾಣಿಕೆಗೆ ಕಾಂಗ್ರೆಸ್ ನಾಯಕರು ಒಲವು ಹೊಂದಿದ್ದಾರೆ. ಈಗಾಗಲೇ ಕೆಲವುನಾಯಕರು ಸಿಪಿಎಂ ನಾಯಕರೊಂದಿಗೆ ಸ್ಥಾನ ಹೊಂದಾಣಿಕೆ ಕುರಿತುಅನೌಪಚಾರಿಕ ಮಾತುಕತೆ ನಡೆಸಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
* ಇದನ್ನೂ ಓದಿ:ತಮಿಳುನಾಡಿನಲ್ಲಿ ಮೈತ್ರಿಗೆ ಬಿಜೆಪಿ ಯತ್ನ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.