ಮುಂಬೈ: ವಕೀಲೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಬಾಂಬೆ ಹೈಕೋರ್ಟ್ ಬುಧವಾರ ಕಾಯ್ದಿರಿಸಿತು.
ಸುಧಾ ಭಾರದ್ವಾಜ್ ಅವರು ಎಲ್ಗಾರ್ ಪರಿಷತ್ ಹಾಗೂ ಮಾವೊವಾದಿಗಳ ನಡುವಿನ ನಂಟಿಗೆ ಸಂಬಂಧಿಸಿದ ಪ್ರಕರಣದ ಆರೋಪಿಯಾಗಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ಪರ ಅಡ್ವೋಕೇಟ್ ಜನರಲ್ ಅಶುತೋಷ್ ಕುಂಭಕೋಣಿ, ಎನ್‌ಐಎ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ವಾದ ಮಂಡಿಸಿ, ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದರು. ಸುಧಾ ಭಾರದ್ವಾಜ್ ಪರ ಹಿರಿಯ ವಕೀಲ ಯುಗ್ ಚೌಧರಿ ವಾದ ಮಂಡಿಸಿದರು.
ಎರಡೂ ಕಡೆಯವರ ವಾದ ಆಲಿಸಿದ, ನ್ಯಾಯಮೂರ್ತಿಗಳಾದ ಎಸ್.ಎಸ್.ಶಿಂಧೆ ಹಾಗೂ ಎನ್.ಜೆ.ಜಮಾದಾರ್ ಅವರು ತೀರ್ಪನ್ನು ಕಾಯ್ದಿರಿಸಿ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.