ADVERTISEMENT

ಎಲ್ಗಾರ್‌ ಪರಿಷತ್‌ ಪ್ರಕರಣ: ಗೌತಮ್‌ ನವಲಖಾ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 10:31 IST
Last Updated 6 ಏಪ್ರಿಲ್ 2023, 10:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಎಲ್ಗಾರ್‌ ಪರಿಷತ್‌–ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಪ್ರಕರಣದಲ್ಲಿ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯವು ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಜಾಮೀನು ಅರ್ಜಿಯನ್ನು ಗುರುವಾರ ತಿರಸ್ಕರಿಸಿತು.

ವಿಶೇಷ ನ್ಯಾಯಾಧೀಶ ರಾಜೇಶ್‌ ಜೆ. ಕಠಾರಿಯಾ ಅವರು ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಮತ್ತು ಹೊಸದಾಗಿ ಜಾಮೀನು ಅರ್ಜ ಸಲ್ಲಿಸುವಂತೆ ಸೂಚನೆ ನೀಡಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಎಲ್ಗಾರ್‌ ಪರಿಷತ್‌ ಪ್ರಕರಣ ಸಂಬಂಧ ನವಲಖಾ ಅವರನ್ನು 2018 ಆಗಸ್ಟ್‌ 28ರಂದು ಬಂಧಿಸಲಾಗಿತ್ತು. ಪ್ರಾರಂಭದಲ್ಲಿ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು. ನಂತರ ಅವರನ್ನು ತಲೋಜಾ ಕಾರ್ಯಾಗೃಹದಲ್ಲಿ ಇರಿಸಲಾಯಿತು.

ADVERTISEMENT

ಡಿಸೆಂಬರ್ 31, 2017 ರಂದು ಪುಣೆಯಲ್ಲಿ ನಡೆದ ಎಲ್ಗಾರ್‌ ಪರಿಷತ್‌ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.