ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಡೇಂಗರ್‌ಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು.
ಶನಿವಾರ ಶೋಧ ಕಾರ್ಯ ನಡೆಸುತ್ತಿದ್ದವೇಳೆ ಉಗ್ರರು ಭದ್ರತಾ ಪಡೆಯ ಯೋಧರ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಗುಂಡಿನ ದಾಳಿಯ ಮೂಲಕ ಭದ್ರತಾ ಪಡೆ ಪ್ರತಿಕ್ರಿಯಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು, ಹೆಚ್ಚಿನ ವಿವರಗಳು ಸಿಗಬೇಕಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.