ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಶುಕ್ರವಾರ, ಜ.5) ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಮುಂಜಾನೆ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಭದ್ರತಾ ಪಡೆಗಳು ತಿರುಗೇಟು ನೀಡಿವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಎರಡೂ ಕಡೆಯಿಂದಲೂ ಈವರೆಗೆ ಯಾವುದೇ ಜೀವ ಹಾನಿಯ ಬಗ್ಗೆ ಮಾಹಿತಿ ಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.