ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗ್ರಾಮವೊಂದರಲ್ಲಿ ಭಾನುವಾರ ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಗ್ರಾಮದಲ್ಲಿ ಸಿಕ್ಕಿಬಿದ್ದಿರುವ ಮೂವರು ಭಯೋತ್ಪಾದಕರ ಪೈಕಿ ಓಬ್ಬ ಉನ್ನತ ಉಗ್ರಗಾಮಿ ಗುಂಪಿನ ಕಮಾಂಡರ್ ಎಂದು ಹೇಳಲಾಗಿದೆ.
ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿಯ ನಂತರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ವೇಳೆ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ಅಪರಿಚಿತ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾದ ಒಂದು ದಿನದ ನಂತರ ಈ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.