ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುರುವಾರ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಬಲಿಯಾಗಿದ್ದಾರೆ.
ಸಿಆರ್‌ಪಿಎಫ್, ರಾಷ್ಟ್ರೀಯ ರೈಫಲ್ಸ್ ಹಾಗೂ ವಿಶೇಷ ಕಾರ್ಯಾಚರಣೆ ತಂಡಗಳು ನಡೆಸುತ್ತಿದ್ದ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಭದ್ರತಾ ಪಡೆಗಳು ತಕ್ಕ ಉತ್ತರ ನೀಡಿದ್ದು, ದಲಿಪೊರಾದ ಮನೆಯೊಂದರಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಇನ್ನೂ ಇಬ್ಬರು ಯೋಧರು ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಪುಲ್ವಾಮಾದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.ಅಡಗಿರುವ ಮತ್ತಷ್ಟು ಉಗ್ರರನ್ನು ಹೊರಗೆಳೆಯಲು ಶೋಧ ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.