ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಭಾನುವಾರ ಬೆಳಿಗ್ಗೆ 11 ಗಂಟೆಯ ಹೊತ್ತಿಗೆ ಸೇನೆ ಮತ್ತು ಪೊಲೀಸರು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮೂರರಿಂದ ನಾಲ್ಕು ಉಗ್ರರು ಸಿಲುಕಿರುವ ಸಾಧ್ಯತೆಯಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇದೇ ಉಗ್ರರ ಗುಂಪು ಗ್ರಾಮಗಳಿಗೆ ನುಗ್ಗಿ ಇಬ್ಬರು ನಾಗರಿಕರನ್ನು ಹತ್ಯೆ ಮಾಡಿದ್ದರು. ಶೋಧಕಾರ್ಯ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.