ರಾಯಪುರ(ಛತ್ತೀಸಗಢ): ಕಂಕೇರ್ ಜಿಲ್ಲೆಯ ನಾರಾಯಣಪುರ ಗಡಿಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್ಐ' ವರದಿ ಮಾಡಿದೆ.
ಕಂಕೇರ್ ಜಿಲ್ಲೆಯ ನಾರಾಯಣಪುರ ಗಡಿಯಲ್ಲಿರುವ ಅಬುಜ್ಮದ್ನ ಕಾಡಿನಲ್ಲಿ ಇಂದು(ಶನಿವಾರ) ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಈವರೆಗೆ ಯಾವುದೇ ಪ್ರಾಣ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.