ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಮಂಗಳವಾರ ಕೂಡ ಗುಂಡಿನಚಕಮಕಿ ನಡೆದಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಉಗ್ರರ ಬಗ್ಗೆ ಲಭಿಸಿರುವ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಉತ್ತರ ಕಾಶ್ಮೀರ ಜಿಲ್ಲೆಯ ನಾಗ್ಮಾರ್ಗ್ನಲ್ಲಿ ಶೋಧ ಕಾರ್ಯವನ್ನು ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳತ್ತ ಭಯೋತ್ಪಾದಕರು ಗುಂಡು ಹಾರಿಸಿದ್ದು, ಭದ್ರತಾ ಪಡೆಗಳು ಪ್ರತ್ಯುತ್ತರ ನೀಡಿದ್ದಾರೆ. ಈ ಪ್ರದೇಶದಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.