ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮತ್ತೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಆಧಾರದ ಮೇಲೆ, ಭದ್ರತಾ ಪಡೆಗಳು ಹಾಗೂ ಉತ್ತರ ಕಾಶ್ಮೀರದ ಪೊಲೀಸರು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅವರು ಹೇಳಿದರು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಸಿಬ್ಬಂದಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.
ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.