ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜರುಗುವ ಮಂಡಲ ಪೂಜೆ–ಸಂಕ್ರಾಂತಿ ಉತ್ಸವಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ವೈದ್ಯಕೀಯ ಸೇವೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕೇರಳ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
‘ಈಗಾಗಲೇ ಒದಗಿಸಿರುವ ತುರ್ತು ವೈದ್ಯಕೀಯ ಸೇವೆ ಮತ್ತು ಹೃದ್ರೋಗ ಕೇಂದ್ರಗಳಲ್ಲಿ ಕೊರತೆ ಕಂಡು ಬಂದರೆ ಸೂಕ್ತ ಆದೇಶಗಳನ್ನು ಕೋರಿ ವರದಿ ಸಲ್ಲಿಸುವ ಮೂಲಕ ನ್ಯಾಯಾಲಯದ ಗಮನಕ್ಕೆ ತರಬೇಕು’ ಎಂದು ನ್ಯಾಯಮೂರ್ತಿಗಳಾದ ಅನಿಲ್ ಕೆ.ನರೇಂದ್ರನ್ ಮತ್ತು ಪಿ.ಜಿ. ಅಜಿತ್ ಕುಮಾರ್ ಅವರನ್ನೊಳಗೊಂಡ ಪೀಠವೊಂದು ಹೇಳಿದೆ.
ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಭಕ್ತರಿಗೆ ನೀಲಿಮಲ–ಅಪ್ಪಾಚಿಮೇಡು ಮಾರ್ಗವನ್ನು ತೆರೆದರೆ ಅಲ್ಲಿ ವೈದ್ಯಕೀಯ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಶಬರಿಮಲೆಯ ವಿಶೇಷ ಆಯುಕ್ತ ಸಲ್ಲಿಸಿದ ವರದಿಯನ್ನು ಆಧರಿಸಿ ನ್ಯಾಯಾಲಯ ಸ್ವಯಂ ದಾಖಲಿಸಿಕೊಂಡ ಅರ್ಜಿಯನ್ನು ವಿಚಾರಣೆ ನಡೆಸಿ ಪೀಠ ಈ ನಿರ್ದೇಶನ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.