ADVERTISEMENT

ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಭಾರತ: ಕೈಗಾರಿಕಾ ಸಚಿವ ಪಿಯೂಷ್ ಗೋಯಲ್

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 6:02 IST
Last Updated 19 ಅಕ್ಟೋಬರ್ 2024, 6:02 IST
ಪಿಯೂಷ್ ಗೋಯಲ್
ಪಿಯೂಷ್ ಗೋಯಲ್   

ನವದೆಹಲಿ: ಭಾರತ ಹಿಂದೆಂದಿಗಿಂತಲೂ ಇಂದು ಅತ್ಯಂತ ಸಶಕ್ತವಾಗಿರುವುದರಿಂದ ಜಗತ್ತಿನ ಪ್ರತಿಯೊಬ್ಬ ಗಣ್ಯ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರ ವಹಿವಾಟು ಮಾಡಲು ಬಯಸುತ್ತಿದ್ದಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ದೆಹಲಿಯಲ್ಲಿ ಶುಕ್ರವಾರ ನಡೆದ ಉದ್ಯಮಿದಾರರ ಸಮ್ಮೇಳನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದೆ. ವಿದೇಶಿ ವಿನಿಮಯ ಮೀಸಲು 700 ಬಿಲಿಯನ್ ಡಾಲರ್ ಮೀರಿದೆ. ದೇಶದ ಆರ್ಥಿಕ ಬೆಳವಣಿಗೆ ದರ ಆರೋಗ್ಯಕರವಾಗಿದೆ ಎಂದು ಹೇಳಿದ್ದಾರೆ.

ಹೀಗಾಗಿ ಭಾರತ ಹೂಡಿಕೆದಾರರ ನೆಚ್ಚಿನ ತಾಣವಾಗಿ ಬದಲಾಗಿದೆ. ಹೂಡಿಕೆದಾರರ ನಂಬಿಕೆಯ ಸ್ನೇಹಿತನಾಗುತ್ತಿದೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ADVERTISEMENT

ಸಿಸ್ಕೊ ಕಂಪನಿಯ ಮಾಜಿ ಮುಖ್ಯಸ್ಥ 3 ಟ್ರಿಲಿಯನ್ ಡಾಲರ್ ಹೂಡಿಕೆಗಾಗಿ ಭಾರತವೇ ನಮ್ಮ ಆಯ್ಕೆ ಎಂದು ಹೇಳಿದ್ದಾರೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.