ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮಲ್ಲಾ ಜಿಲ್ಲೆಯಲ್ಲಿ ಸೊಪೋರ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಎರಡು ದಿನಗಳ ಹಿಂದಿನಿಂದ ನಡೆಸುತ್ತಿದ್ದರು.
ಶನಿವಾರ ಸಂಜೆ ವೇಳೆಗೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಇಲ್ಲಿಯವರೆಗೂ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದ್ದು ಕಾರ್ಯಾಚರಣೆ ಮುಂದುವರಿದಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.