ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಅಧ್ಯಕ್ಷ ನಾನಾ ಪಟೋಲೆ ಅವರಿಗೆ ಬರೆದಿರುವ ಪತ್ರದಲ್ಲಿ ಪಕ್ಷ ಬಿಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿರುವ ಅವರು, ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ಧಿಕಿ ಮತ್ತು ಮಿಲಿಂದ್ ದಿಯೋರಾ ಪಕ್ಷ ತೊರೆದ ಕೆಲ ದಿನಗಳಲ್ಲೇ ಅಶೋಕ್ ಚವಾಣ್ ಸಹ ಪಕ್ಷ ಬಿಟ್ಟಿದ್ದಾರೆ.
ಈ ಕುರಿತಂತೆ ಅಶೋಕ್ ವಚಾಣ್ ಮತ್ತು ನಾನಾ ಪಟೋಲೆ ಅವರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.
ಮಹಾರಾಷ್ಟ್ರದಲ್ಲಿ ಚವಾಣ್ ಕುಟುಂಬವು ರಾಜಕೀಯವಾಗಿ ಅತ್ಯಂತ ಪ್ರಭಾವ ಉಳ್ಳದ್ದಾಗಿದೆ. ಅಶೋಕ್ ಚವಾಣ್ ಮರಾಠಿಗರಾಗಿರುವುದೂ ರಾಜಕೀಯ ಮೇಲೆ ಗಂಭೀರ ಪರಿಣಾಣ ಬೀರಲಿದೆ ಎನ್ನುತ್ತವೆ ವರದಿಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.