ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವೆ ಮತ್ತು ಪಿಡಬ್ಲ್ಯುಪಿ ಪಕ್ಷದ ನಾಯಕಿ ಮೀನಾಕ್ಷಿ ಪಾಟೀಲ್ (77) ಶುಕ್ರವಾರ ನಿಧನರಾಗಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ರಾಯಗಡ ಜಿಲ್ಲೆಯ ಅಲಿಬಾಗ್ ತಾಲೂಕಿನಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅವರು ಪುತ್ರ, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.
ಪಾಟೀಲ್ ಅವರು ಮೂರು ಬಾರಿ 1995, 1999 ಮತ್ತು 2009 ರಲ್ಲಿ ಅಲಿಬಾಗ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 1999ರಲ್ಲಿ ವಿಲಾಸ್ ರಾವ್ ದೇಶಮುಖ್ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ರಾಜ್ಯ ಸಚಿವೆಯಾಗಿ ಸೇವೆ ಸಲ್ಲಿಸಿದ್ದರು.
ಪಾಟೀಲ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಂತಾಪ ಸೂಚಿಸಿದ್ದಾರೆ. 'ಸಮಾಜದ ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಅವರ ಜೀವನವನ್ನು ಮುಡಿಪಾಗಿಟ್ಟ ನಿರ್ಭೀತ ನಾಯಕಿ' ಎಂದು ಸ್ಮರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.