ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ ಖಡಸೆ ಅವರಿಗೆ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದರು.
ಸೋಮವಾರ ಅಪರಿಚಿತ ನಂಬರ್‌ನಿಂದ ಅವರಿಗೆ ಬೆದರಿಕೆ ಕರೆ ಬಂದಿದೆ. ಈ ಬೆನ್ನಲ್ಲೇ ಅವರು ಜಲಗಾಂವ್ ಜಿಲ್ಲೆಯ ಮುಕ್ತಾಯೀನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ಹೇಳಿದರು.
‘ಕರೆ ಮಾಡಿದ್ದ ಆರೋಪಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಛೋಟಾ ಶಕೀಲ್ ಅವರ ಹೆಸರನ್ನು ಉಲ್ಲೇಖಿಸಿದ್ದ’ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಎನ್‌ಸಿಪಿ (ಶರದ್ ಪವಾರ್ ಬಣ)ಯಲ್ಲಿರುವ ಖಡಸೆ, ಶೀಘ್ರವೇ ಬಿಜೆಪಿಗೆ ಮರಳುವುದಾಗಿ ಇತ್ತೀಚೆಗೆ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.