ADVERTISEMENT

ವೈದ್ಯಕೀಯ ತಪಾಸಣೆ: ಏಮ್ಸ್‌ಗೆ ಕವಿತಾ ಕರೆದೊಯ್ಯಲು ಕೋರ್ಟ್ ಸೂಚನೆ

ಪಿಟಿಐ
Published 18 ಜುಲೈ 2024, 14:37 IST
Last Updated 18 ಜುಲೈ 2024, 14:37 IST
ಕೆ ಕವಿತಾ
ಕೆ ಕವಿತಾ   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ತಿಹಾರ್ ಜೈಲಿನಲ್ಲಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಏಮ್ಸ್‌ಗೆ ಕರೆದೊಯ್ಯವಂತೆ ದೆಹಲಿ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ.

ಕವಿತಾ ಅವರ ಆರೋಗ್ಯ ಮೇಲ್ವಿಚಾರಣಾ ಉಪಕರಣಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ಫಲಿತಾಂಶದಲ್ಲಿ ವ್ಯತ್ಯಾಸಗಳಿವೆ ಎಂದು ಆರೋಪಿಸಿದ ನಂತರ ನ್ಯಾಯಾಲಯವು ಈ ಆದೇಶವನ್ನು ನೀಡಿದೆ.

ನ್ಯಾಯಾಂಗ ಬಂಧನದ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಕವಿತಾ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ.

ADVERTISEMENT

ನ್ಯಾಯಾಧೀಶರು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಕರೆದ್ಯೊಯ್ಯುವಂತೆ ಆದೇಶಿಸಿದ್ದು, ಅವರ ವೈದ್ಯಕೀಯ ಸ್ಥಿತಿಯ ಬಗ್ಗೆ ವರದಿ ಸಲ್ಲಿಸುವಂತೆ ಆಸ್ಪತ್ರೆಗೆ ಸೂಚಿಸಿದರು. ಕವಿತಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 22ರ ವರೆಗೆ ವಿಸ್ತರಿಸಿದರು.

ಮಂಗಳವಾರ ಸ್ತ್ರೀರೋಗ ಸಮಸ್ಯೆ ಮತ್ತು ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಕೆ. ಕವಿತಾ ಅವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ  ಕರೆದೊಯ್ಯಲಾಯಿತು. ಎರಡು ಗಂಟೆ ಚಿಕಿತ್ಸೆ ನೀಡಿ, ಮತ್ತೆ ಜೈಲಿಗೆ ಕಳುಹಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.