ADVERTISEMENT

ಅಬಕಾರಿ ನೀತಿ ಹಗರಣ: ಅರವಿಂದ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜುಲೈ 2024, 9:53 IST
Last Updated 12 ಜುಲೈ 2024, 9:53 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ವಿಧಿಸಲಾಗಿರುವ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 25ರವರೆಗೆ ವಿಸ್ತರಿಸಿ ರೋಸ್ ಅವೆನ್ಯೂ ನ್ಯಾಯಾಲಯವು ಇಂದು (ಶುಕ್ರವಾರ) ಆದೇಶಿಸಿದೆ.

ಇದೇ ಹಗರಣದ ಇ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಬೆಳಿಗ್ಗೆ ಮಧ್ಯಂತರ ಜಾಮೀನು ನೀಡಿತ್ತು.

ADVERTISEMENT

ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ಕೇಜ್ರಿವಾಲ್ ಈಚೆಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ಪೀಠವು, ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯ ಸೆಕ್ಷನ್‌ 19ರ ಅನ್ವಯ ಬಂಧನದ ಷರತ್ತು ಓದಬೇಕೇ ಎನ್ನುವುದನ್ನು ತೀರ್ಮಾನಿಸಲು ಪ್ರಕರಣವನ್ನು ಹೆಚ್ಚುವರಿ ಪೀಠಕ್ಕೆ ವರ್ಗಾಯಿಸಿದೆ.

ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ದಾಖಲಿಸಿಕೊಂಡ ಪ್ರಕರಣಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿದರೂ, ಜೈಲಿನಿಂದ ಹೊರಬರುವಂತಿಲ್ಲ. ಇದೇ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರನ್ನು ಸಿಬಿಐ ಬಂಧಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.