ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ, ಮತ್ತೊಬ್ಬ ಆರೋಪಿ ವಿಜಯ್ ನಾಯರ್ ಮತ್ತು ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯ ಮೇ 8 ರವರೆಗೆ ವಿಸ್ತರಿಸಿದೆ.
ಈ ಹಿಂದೆ ವಿಧಿಸಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇ.ಡಿ ಆರೋಪಿಗಳನ್ನು ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿತ್ತು.
ಚಾರ್ಜ್ ಶೀಟ್‌ಗೆ ಸಂಬಂಧಿಸಿದ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಎಷ್ಟು ಸಮಯ ಬೇಕಾಗುತ್ತದೆ ಎಂಬ ಕುರಿತು ವರದಿ ಸಲ್ಲಿಸುವಂತೆಯೂ ನ್ಯಾಯಾಧೀಶರು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.