ADVERTISEMENT

ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 10 ಮೇ 2024, 12:45 IST
Last Updated 10 ಮೇ 2024, 12:45 IST
ಕೆ. ಕವಿತಾ 
ಕೆ. ಕವಿತಾ    

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ಹೈಕೋರ್ಟ್ ನೋಟಿಸ್‌ ನೀಡಿದೆ. 

ಇ.ಡಿ.ಗೆ ಪ್ರತಿಕ್ರಿಯೆ ನೀಡಲು ಕಾಲಾವಕಾಶ ನೀಡಿದ ನ್ಯಾಯಮೂರ್ತಿ ಸ್ವರಣ ಕಾಂತ ಶರ್ಮಾ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ.24ಕ್ಕೆ ನಿಗದಿಪಡಿಸಿದರು. 

ಮುಂದಿನ ವಾರವೇ ವಿಚಾರಣೆ ನಿಗದಿಪಡಿಸುವಂತೆ ನ್ಯಾಯಾಲಯವನ್ನು ಕೋರಿದ ಕವಿತಾ ಪರ ವಕೀಲರಾದ ವಿಕ್ರಮ್‌ ಚೌಧರಿ ಅವರು, ಕವಿತಾ ಅವರು ಈ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದ ವೇಳೆಯೇ ಇ.ಡಿ ಪ್ರತಿಕ್ರಿಯೆ ದಾಖಲಾಗಿದೆ ಎಂದು ತಿಳಿಸಿದರು. ಆದರೆ ನ್ಯಾಯಾಲಯ ಇದಕ್ಕೆ ಸಮ್ಮತಿಸಲಿಲ್ಲ. 

ADVERTISEMENT

ಮಾ.15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು. ಇವರು ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ (ಕೇಂದ್ರೀಯ ತನಿಖಾ ದಳ) ಕವಿತಾ ಅವರನ್ನು ಬಂಧಿಸಿತು. ಈ ಪ್ರಕರಣದಲ್ಲಿ ಕವಿತಾ ಅವರು ಕೋರಿದ್ದ ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯವು ಮೇ6 ರಂದು ತಿರಸ್ಕರಿಸಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.