ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟು ಹೊಂದಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್ 18ರವರೆಗೆ ವಿಸ್ತರಿಸಿದೆ.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದರು, ಈ ಹಿಂದೆ ನೀಡಲಾದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ದೆಹಲಿ ಅಬಕಾರಿ ನೀತಿಯನ್ನು ಮರು ಪರಿಷ್ಕರಿಸುವಾಗ ಅಕ್ರಮಗಳು ನಡೆದಿವೆ, ಪರವಾನಗಿ ಹೊಂದಿರುವವರಿಗೆ ಅನುಕೂಲ ಮಾಡಿಕೊಡಲಾಗಿದೆ. ಪರವಾನಗಿ ಶುಲ್ಕ ಮನ್ನಾ ಅಥವಾ ಕಡಿಮೆ ಮಾಡಲಾಗಿದೆ. ಪ್ರಾಧಿಕಾರದ ಅನುಮತಿ ಇಲ್ಲದೇ ಪರವಾನಗಿಗಳನ್ನು ನೀಡಲಾಗಿದೆ ಎಂದು ಸಿಬಿಐ ಮತ್ತು ಇಡಿ ನ್ಯಾಯಾಲಯದಲ್ಲಿ ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.