ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮೇ 14ರವರೆಗೆ ಇಲ್ಲಿನ ಕೋರ್ಟ್ ವಿಸ್ತರಿಸಿದೆ.
ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಕಾರಣ ಕವಿತಾ ಅವರನ್ನು ಮಂಗಳವಾರ ಕೋರ್ಟ್ ಎದುರು ಹಾಜರುಪಡಿಸಲಾಗಿತ್ತು. ಸಿಬಿಐ, ಇ.ಡಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತಿರಿಸಿ ಆದೇಶ ಹೊರಡಿಸಿದರು.
ವಿಚಾರಣೆ ವೇಳೆ ಇ.ಡಿ, ‘ತನಿಖೆಯು ಪ್ರಮುಖ ಹಂತದಲ್ಲಿದೆ. ಒಂದು ವಾರದ ಒಳಗಾಗಿ ಕವಿತಾ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಬಹುದು’ ಎಂದು ತಿಳಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.