ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಎಎಪಿ ನಾಯಕ ಮನಿಶ್ ಸಿಸೋಡಿಯಾ ಅವರು ಸಾರ್ವತ್ರಿಕ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ, ದೆಹಲಿ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಇ.ಡಿ) ಮತ್ತು ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.
ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಇದೇ 20ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸೂಚಿಸಿದ್ದಾರೆ. ಈ ಕುರಿತು ಇದೇ 20ರಂದು ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ.
ದೆಹಲಿ ಅಬಕಾರಿ ನೀತಿಯ ಹಗರಣದಲ್ಲಿನ ಪಾತ್ರಕ್ಕಾಗಿ ಸಿಬಿಐ ಸಿಸೋಡಿಯಾ ಅವರನ್ನು 2023ರ ಫೆಬ್ರುವರಿ 26ರಂದು ಬಂಧಿಸಿತ್ತು. ಇದೇ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿಯು ಅವರನ್ನು 2023ರ ಮಾರ್ಚ್ 9ರಂದು ಬಂಧಿಸಿತ್ತು. ಅವರು 2023ರ ಫೆಬ್ರುವರಿ 28ರಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.