ADVERTISEMENT

ಅಬಕಾರಿ ಹಗರಣ: ದೆಹಲಿ ಸಿಎಂ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ಪಿಟಿಐ
Published 7 ಮೇ 2024, 10:00 IST
Last Updated 7 ಮೇ 2024, 10:00 IST
<div class="paragraphs"><p>ಅರವಿಂದ ಕೇಜ್ರಿವಾಲ್ </p></div>

ಅರವಿಂದ ಕೇಜ್ರಿವಾಲ್

   

–ಪಿಟಿಐ ಚಿತ್ರ

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ.

ADVERTISEMENT

ವಿಡಿಯೊ ಕಾನ್ಫರೆನ್ಸ್ ಮೂಲಕ ಕೇಜ್ರಿವಾಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಹಾಗೂ ಸಹ ಆರೋಪಿ ಚನ್‌ಪ್ರೀತ್ ಸಿಂಗ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.