ನವದಹೆಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ವಿಡಿಯೊ ಕಾನ್ಫರೆನ್ಸ್ ಮೂಲಕ ಮೂವರನ್ನು ವಿಶೇಷ ನ್ಯಾಯಧೀಶರೆದುರು ವಿಚಾರಣೆಗೆ ಹಾಜರುಪಡಿಸಲಾಗಿತ್ತು.
ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರ ಕಸ್ಟಡಿಯನ್ನು ಜುಲೈ 31 ರವರೆಗೆ ವಿಸ್ತರಿಸಿದರೆ, ಸಿಬಿಐ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿ ನಿರ್ದೇಶಿಸಿದ್ದಾರೆ.
ಜತೆಗೆ ಮನೀಶ್ ಸಿಸೋಡಿಯಾ, ಕವಿತಾ ಸೇರಿ ಇತರರ ನ್ಯಾಯಾಂಗ ಬಂಧನ ಅವಧಿಯನ್ನೂ ಜುಲೈ 31ರವರೆಗೆ ವಿಸ್ತರಿಸಿದ್ದಾರೆ.
ಇ. ಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು, ಆದರೆ, ಪ್ರಕರಣದಲ್ಲಿ ಅವರು ಜಾಮೀನು ಬಾಂಡ್ ಅನ್ನು ಒದಗಿಸದ ಕಾರಣ ಅವರನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಸದ್ಯ ಕೇಜ್ರಿವಾಲ್ ಅವರು ಸಿಬಿಐ ಪ್ರಕರಣದಲ್ಲಿ ನ್ಯಾಯಾಂಗ ಬಂಧಿನದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.