ADVERTISEMENT

ಜುಲೈ 11ಕ್ಕೆ ಇ.ಡಿ ಸಮನ್ಸ್‌ ವಿರುದ್ಧ ಕೇಜ್ರಿವಾಲ್ ಅರ್ಜಿ ವಿಚಾರಣೆ

ಪಿಟಿಐ
Published 15 ಮೇ 2024, 13:38 IST
Last Updated 15 ಮೇ 2024, 13:38 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮ ವಿರುದ್ಧ ಜಾರಿ ಮಾಡಿದ ಸಮನ್ಸ್‌ಗಳನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಬುಧವಾರ ಜುಲೈ 11ಕ್ಕೆ ನಿಗದಿಪಡಿಸಿದೆ. 

ದೆಹಲಿಯ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕೇಜ್ರಿವಾಲ್ ಅವಿಗೆ ಇ.ಡಿ ಸಮನ್ಸ್‌ ಜಾರಿಗೊಳಿಸಿದೆ.

ಈ ಕುರಿತು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈತ ಅವರ ನೇತೃತ್ವದ ಪೀಠವು, ಜಾರಿ ನಿರ್ದೇಶನಾಲಯದ ಉತ್ತರಕ್ಕೆ ಪ್ರತಿಕ್ರಿಯೆ ನೀಡಲು ಎಎಪಿ ಮುಖಂಡ ಕೇಜ್ರಿವಾಲ್ ಅವರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.