ADVERTISEMENT

ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಅರ್ಜಿ: ಇಂದು ‘ಸುಪ್ರೀಂ’ನಿಂದ ತೀರ್ಪು

ಪಿಟಿಐ
Published 11 ಜುಲೈ 2024, 23:47 IST
Last Updated 11 ಜುಲೈ 2024, 23:47 IST
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಜೊತೆ ನಂಟಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ತೀರ್ಪನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ಪ್ರಕಟಿಸಲಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲಿದೆ ಎಂದು ಸುಪ್ರೀಂ ಕೋರ್ಟ್‌ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿರುವ ವಿಚಾರಣಾ ಪಟ್ಟಿಯಲ್ಲಿ ಹೇಳಲಾಗಿದೆ.

ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಪೀಠವು, ಮೇ 17ರಂದು ತೀರ್ಪು ಕಾಯ್ದಿರಿಸಿ ಆದೇಶಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.