ADVERTISEMENT

ಮತಗಟ್ಟೆ ಸಮೀಕ್ಷೆಗಳು: ಸರಾಸರಿ: ಎನ್‌ಡಿಎಗೆ ಗೆಲುವಿನ ಸಿರಿ

​ಪ್ರಜಾವಾಣಿ ವಾರ್ತೆ
Published 20 ಮೇ 2019, 20:25 IST
Last Updated 20 ಮೇ 2019, 20:25 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮುಂದಾಳತ್ವದ ಎನ್‌ಡಿಎ ಮರಳಿ ಅಧಿಕಾರಕ್ಕೆ ಬರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಅಂದಾಜಿಸಿವೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ 300ಕ್ಕೂ ಹೆಚ್ಚು ಸ್ಥಾನಗಳು ದೊರೆಯಲಿವೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಲೋಕಸಭೆಯಲ್ಲಿ ಸರಳ ಬಹುತಮಕ್ಕೆ ಬೇಕಿರುವುದು 272 ಸ್ಥಾನಗಳು ಮಾತ್ರ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ ಆಗಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ 71 ಕ್ಷೇತ್ರಗಳಲ್ಲಿ ಗೆದ್ದಿತ್ತು. ಈ ಬಾರಿ ಉತ್ತರ ಪ್ರದೇಶದಲ್ಲಿ ಆಗುವ ನಷ್ಟವನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ಸರಿದೂಗಿಸಿಕೊಳ್ಳಲಿದೆ ಎಂಬುದು ಸಮೀಕ್ಷೆಗಳ ಅಂದಾಜು.

ಭಾರಿ ಜಿದ್ದಾಜಿದ್ದಿಗೆ ಸಾಕ್ಷಿಯಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ದೊಡ್ಡ ಮುನ್ನಡೆ ದೊರೆಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಕಳೆದ ಚುನಾವಣೆಯಲ್ಲಿ ಈ ರಾಜ್ಯದಲ್ಲಿ ಬಿಜೆಪಿಗೆ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ದಕ್ಕಿತ್ತು. ಆದರೆ, ಈ ಬಾರಿ 11ರಿಂದ 16 ಕ್ಷೇತ್ರಗಳು ಸಿಗಬಹುದು ಎಂದು ಸಮೀಕ್ಷೆಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.