ADVERTISEMENT

ಮತಗಟ್ಟೆ ಸಮೀಕ್ಷೆಗಳು ಕೇವಲ 'ಟೈಮ್ ಪಾಸ್' ಎಂದ ಒಮರ್ ಅಬ್ದುಲ್ಲಾ

ಪಿಟಿಐ
Published 5 ಅಕ್ಟೋಬರ್ 2024, 15:31 IST
Last Updated 5 ಅಕ್ಟೋಬರ್ 2024, 15:31 IST
<div class="paragraphs"><p>ಒಮರ್ ಅಬ್ದುಲ್ಲಾ</p></div>

ಒಮರ್ ಅಬ್ದುಲ್ಲಾ

   

(ಪಿಟಿಐ ಚಿತ್ರ)

ಜಮ್ಮು/ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಮುನ್ನಡೆ ಗಳಿಸುವ ಸಾಧ್ಯತೆ ಇದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಇನ್ನೊಂದೆಡೆ ಬಿಜೆಪಿ ಸರ್ಕಾರ ರಚಿಸುವ ನಿರೀಕ್ಷೆಯಲ್ಲಿದೆ.

ADVERTISEMENT

ತಮ್ಮ ಪಕ್ಷದ ಪರ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದರೂ ಎಕ್ಸಿಟ್ ಪೋಲ್‌ಗಳನ್ನು ತಳ್ಳಿ ಹಾಕಿರುವ ಎನ್‌ಸಿ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ, ಇದು ಕೇವಲ 'ಟೈಮ್ ಪಾಸ್' ಎಂದಿದ್ದಾರೆ.

ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, 'ಇತ್ತೀಚೆಗಿನ ಸಾರ್ವತ್ರಿಕ ಚುನಾವಣೆಯಲ್ಲಿ ವೈಫಲ್ಯದ ಬಳಿಕ ಚಾನೆಲ್‌ಗಳು ಮತಗಟ್ಟೆ ಸಮೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ. ಚಾನೆಲ್, ಸಾಮಾಜಿಕ ಮಾಧ್ಯಮ, ವಾಟ್ಸ್‌ಆ್ಯಪ್ ಇತ್ಯಾದಿಗಳಲ್ಲಿ ಬರುವ ಸಮೀಕ್ಷೆಗಳನ್ನು ನಾನು ನಿರಾಕರಿಸುತ್ತೇನೆ. ಏಕೆಂದರೆ ಅಕ್ಟೋಬರ್ 8ರಂದು ಮಾತ್ರ ಸ್ಪಷ್ಟ ಅಂಕಿ ಗೊತ್ತಾಗಲಿದೆ. ಉಳಿದೆಲ್ಲವೂ ಕೇವಲ 'ಟೈಮ್ ಪಾಸ್' ಎಂದು ಹೇಳಿದ್ದಾರೆ.

ಮತ್ತೊಂದೆಡೆ ಜಮ್ಮು ಕಾಶ್ಮೀರದ ಬಿಜೆಪಿ ಘಟಕದ ಅಧ್ಯಕ್ಷ ರವಿಂದರ್ ರೈನಾ, ಅಕ್ಟೋಬರ್ 8ರಂದು ಫಲಿತಾಂಶ ಹೊರಬೀಳಲಿದ್ದು, ಬಿಜೆಪಿ ಗೆಲ್ಲುವ ನಿರೀಕ್ಷೆಯಲ್ಲಿದ್ದೇವೆ ಎಂದು ಹೇಳಿದ್ದಾರೆ.

'ಕಣಿವೆ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ನಾಯಕರು ಪ್ರಚಾರ ನಡೆಸಿದ್ದಾರೆ. ಅವರಿಗೆಲ್ಲರಿಗೂ ಜನರಿಂದ ಅಭೂತಪೂರ್ವ ಬೆಂಬಲ ದೊರಕಿದೆ' ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.