ನವದೆಹಲಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ನಭೆಯಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಜರ್ದಾರಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಗುರುವಾರ ತಿರುಗೇಟು ನೀಡಿದ್ದಾರೆ.
ಭಾರತಕ್ಕೆ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ನೀಡುವುದಕ್ಕೂ ಬಿಲಾವಲ್ ಭುಟ್ಟೊ ಈ ಸಭೆಯಲ್ಲಿ ವಿರೋಧ ವ್ಯಕ್ತಪಡಿಸಿದರು.
ಪಾಕಿಸ್ತಾನ ನೆಲದಿಂದಲೇ ಭಯೋತ್ಪಾದನಾ ಚಟುವಟಿಕೆಗಳು ನಡೆಯುತ್ತಿವೆ. 2008ರ ನವೆಂಬರ್ 26ರಂದು ಮುಂಬೈ ಮೇಲಿನ ದಾಳಿ ಸೇರಿದಂತೆ ಹಲವಾರು ಕೃತ್ಯಗಳು ಇದಕ್ಕೆ ನಿದರ್ಶನ ಎಂದು ಬಿಲಾವಲ್ ಭುಟ್ಟೊಗೆ ಜೈಶಂಕರ್ ತಿರುಗೇಟು ನೀಡಿದರು.
‘ಮುಂಬೈ ಮೇಲಿನ ದಾಳಿ ಸೇರಿದಂತೆ ಭಾರತದ ಮೇಲಾದ ಭಯೋತ್ಪಾದಕ ಕೃತ್ಯದ ಪ್ರಕರಣಗಳಲ್ಲಿ ಸಂತ್ರಸ್ತರಾದವರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ’ ಎಂದು ಅವರು ಭದ್ರತಾ ಮಂಡಳಿ ಸಭೆಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.