ADVERTISEMENT

ಕೇರಳದ 3 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ 'ರೆಡ್ ಅಲರ್ಟ್'

ಪಿಟಿಐ
Published 23 ಜೂನ್ 2024, 10:53 IST
Last Updated 23 ಜೂನ್ 2024, 10:53 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತಿರುವನಂತಪುಂ: ಕೇರಳದ ಕೋಯಿಕ್ಕೋಡ್‌, ವಯನಾಡ್‌ ಮತ್ತು ಕುನ್ನೂರ್‌ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆಯು ಭಾನುವಾರ 'ರೆಡ್‌ ಅಲರ್ಟ್‌' ನೀಡಿದೆ.

ಸುಮಾರು 20ರಿಂದ 24 ಸೆಂ.ಮೀ. ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ADVERTISEMENT

ಆರು ಜಿಲ್ಲೆಗಳಲ್ಲಿ 11ರಿಂದ 20 ಸೆಂ.ಮೀ ವರೆಗೆ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಎರ್ನಾಕುಲಂ, ಇಡುಕ್ಕಿ, ತ್ರಿಶೂರ್‌, ಪಾಲಕ್ಕಾಡ್‌, ಮಲಪ್ಪುರಂ ಮತ್ತು ಕಾಸರಗೋಡು ಜಿಲ್ಲೆಗಳಿಗೆ 'ಆರೆಂಜ್‌ ಅಲರ್ಟ್‌' ನೀಡಲಾಗಿದೆ.

ಇನ್ನೂ ಕೆಲವು ಜಿಲ್ಲೆಗಳಲ್ಲಿ 6ರಿಂದ 11 ಸೆಂ.ಮೀ. ಮಳೆ ಸುರಿಯುವ ಸಾಧ್ಯತೆ ಇದ್ದು, 'ಯೆಲ್ಲೋ ಅಲರ್ಟ್‌' ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.