ಅಯೋಧ್ಯೆ: ಅಲಹಾಬಾದ್ ಅನ್ನು ಪ್ರಯಾಗ್‌ರಾಜ್ ಎಂದು ಮರುನಾಮಕರಣ ಮಾಡಿರುವ ಉತ್ತರ ಪ್ರದೇಶ ಸರ್ಕಾರವೀಗ ಫೈಜಾಬಾದ್ ಜಿಲ್ಲೆಯ ಹೆಸರನ್ನು ಅಯೋಧ್ಯೆ ಎಂದು ಬದಲಿಸುವುದಾಗಿ ಘೋಷಿಸಿದೆ.
‘ಅಯೋಧ್ಯೆ ನಮ್ಮ ಗೌರವ, ಹೆಮ್ಮೆ, ಪ್ರತಿಷ್ಠೆಯ ಸಂಕೇತ. ಅಯೋಧ್ಯೆಗೆ ಯಾರೂ ಅನ್ಯಾಯ ಮಾಡಲು ಸಾಧ್ಯವಿಲ್ಲ. ಈ ಪವಿತ್ರ ನಗರ ಭಗವಾನ್ ರಾಮನ ಜತೆಗೆ ಗುರುತಿಸಿಕೊಂಡಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಮಂಗಳವಾರ ಇಲ್ಲಿನ ರಾಮಕಥಾ ಉದ್ಯಾನದಲ್ಲಿ ಆಯೋಜಿಸಿದ್ದ ಭವ್ಯ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ದೀಪೋತ್ಸವ ಹೊಸ ಸಂಪ್ರದಾಯ ಆರಂಭಿಸುವ ಸಂದರ್ಭ. ಅಯೋಧ್ಯೆಯಲ್ಲಿ ರಾಮನ ಹೆಸರಿನಲ್ಲಿ ಹೊಸ ವಿಮಾನ ನಿಲ್ದಾಣ ಹಾಗೂ ರಾಜ ದಶರಥನ ಹೆಸರಿನಲ್ಲಿ ವೈದ್ಯಕೀಯ ಕಾಲೇಜ್ ನಿರ್ಮಿಸಲಾಗುವುದು’ ಎಂದು ಘೋಷಿಸಿದ್ದಾರೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.