ADVERTISEMENT

ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ಸೃಷ್ಟಿ | ದೆಹಲಿ, ಪಂಜಾಬ್‌ನ ಹಲವೆಡೆ ಇ.ಡಿ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಜುಲೈ 2024, 5:50 IST
Last Updated 31 ಜುಲೈ 2024, 5:50 IST
<div class="paragraphs"><p>ಜಾರಿ ನಿರ್ದೇಶನಾಲಯ</p></div>

ಜಾರಿ ನಿರ್ದೇಶನಾಲಯ

   

ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆಯ ನಿಯಮಗಳ ಉಲ್ಲಂಘನೆ ಮತ್ತು ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದೆಹಲಿ, ಚಂಡೀಗಢ, ಪಂಜಾಬ್‌, ಹಿಮಾಚಲ ಪ್ರದೇಶದ ಹಲವಡೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

ಹಿಮಾಚಲ ಪ್ರದೇಶದ ಕಾಂಗ್ರಾ, ಉನಾ, ಶಿಮ್ಲಾ, ಮಂಡಿ, ಕುಲು ಸೇರಿದಂತೆ ವಿವಿಧ ರಾಜ್ಯಗಳ 19 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ADVERTISEMENT

ನಕಲಿ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ಆಧರಿಸಿ ಬ್ಯಾಂಕಿ ಬಿಹಾರಿ ಆಸ್ಪತ್ರೆ, ಫೋರ್ಟಿಸ್ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಲ್ಲಿ ವೈದ್ಯಕೀಯ ಬಿಲ್‌ಗಳನ್ನು ಮಾಡಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಮತ್ತು ಸಾರ್ವಜನಿಕರಿಗೆ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.