ADVERTISEMENT

‘ಭಾರತ ರತ್ನ’ ಪ್ರದಾನ: ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ ನರಸಿಂಹರಾವ್ ಕುಟುಂಬ

ಪಿಟಿಐ
Published 8 ಮೇ 2024, 3:21 IST
Last Updated 8 ಮೇ 2024, 3:21 IST
<div class="paragraphs"><p>ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಕುಟುಂಬಸ್ಥರೊಂದಿಗೆ ನರೇಂದ್ರ ಮೋದಿ ಮಾತುಕತೆ ನಡೆಸಿದರು.</p></div>

ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಕುಟುಂಬಸ್ಥರೊಂದಿಗೆ ನರೇಂದ್ರ ಮೋದಿ ಮಾತುಕತೆ ನಡೆಸಿದರು.

   

ಹೈದರಾಬಾದ್: ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರಿಗೆ ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಕ್ಕಾಗಿ ಕುಟುಂಬಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಹೈದರಾಬಾದ್‌ನ ರಾಜಭವನದಲ್ಲಿ ಮಂಗಳವಾರ ಮೋದಿ ಅವರನ್ನು ಭೇಟಿಯಾದ ಕುಟುಂಬಸ್ಥರು ಆತ್ಮೀಯವಾಗಿ ಮಾತುಕತೆ ನಡೆಸಿದರು.

ADVERTISEMENT

ನರಸಿಂಹರಾವ್ ಅವರ ಪುತ್ರ ಪಿ.ವಿ. ಪ್ರಭಾಕರ ರಾವ್, ಪುತ್ರಿ, ಬಿಆರ್‌ಎಸ್ ಎಂಎಲ್‌ಸಿ ವಾಣಿ ದೇವಿ, ನರಸಿಂಹರಾವ್ ಅವರ ಅಳಿಯ ನಿವೃತ್ತ ಐಪಿಎಸ್ ಅಧಿಕಾರಿ ಕೆ.ಆರ್. ನಂದನ್ ಹಾಗೂ ಬಿಜೆಪಿ ಮುಖಂಡ ಎನ್.ವಿ. ಸುಭಾಷ್ ಇದ್ದರು.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಮೋದಿ, ‘ಹೈದರಾಬಾದ್‌ಗೆ ತಲುಪಿದ ನಂತರ ನಮ್ಮ ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್ ಅವರ ಕುಟುಂಬಸ್ಥರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದೆ. ಇತ್ತೀಚಿನ ವರ್ಷಗಳಲ್ಲಿ ಭಾರತದ ಪ್ರಗತಿಯ ಬಗ್ಗೆ ನರಸಿಂಹರಾವ್ ಕುಟುಂಬಸ್ಥರು ಸಂತೋಷ ವ್ಯಕ್ತಪಡಿಸಿದರು. ಇದೇ ವೇಳೆ ಭಾರತೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳ ಶ್ರೀಮಂತಿಕೆಯ ಬಗ್ಗೆಯೂ ಮಾತನಾಡಿದೆವು’ ಎಂದು ಬರೆದುಕೊಂಡಿದ್ದಾರೆ.

ನರಸಿಂಹರಾವ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದೇವೆ ಎಂದು ಸುಭಾಷ್ ಹೇಳಿದ್ದಾರೆ.

ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಹಣಕಾಸು, ಪ್ರವಾಸೋದ್ಯಮ, ಸನಾತನ ಧರ್ಮ ಮತ್ತು ಇಂದಿನ ರಾಜಕೀಯ ವಿದ್ಯಮಾನಗಳ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮೋದಿ ಅವರೊಂದಿಗೆ ಚರ್ಚೆ ನಡೆಸಲಾಯಿತು ಎಂದು ಸುಭಾಷ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.