ADVERTISEMENT

ಫೋನಿ ಚಂಡಮಾರುತದಿಂದ ಹಾನಿಯಾಗಿರುವ ರಾಜ್ಯಗಳಿಗೆ ₹1000 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ಮೇ 2019, 10:47 IST
Last Updated 3 ಮೇ 2019, 10:47 IST
   

ನವದೆಹಲಿ: ಫೋನಿ ಚಂಡಮಾರುತದಿಂದ ಹಾನಿಯಾಗಿರುವ ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಮುಂಗಡವಾಗಿ₹1000 ಕೋಟಿಗಿಂತ ಹೆಚ್ಚು ಹಣ ಬಿಡುಗಡೆ ಮಾಡಿದೆ.

ಶುಕ್ರವಾರ ಫೋನಿ ಚಂಡಮಾರುತ ಪುರಿ ಸಮೀಪದ ಕರಾವಳಿ ತೀರ ಪ್ರವೇಶಿಸಿದ್ದು, ಇದರ ಆರ್ಭಟಕ್ಕೆ ಮೂವರು ಬಲಿಯಾಗಿದ್ದಾರೆ.

ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕೇಂದ್ರ ಸರ್ಕಾರ ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪುದುಚ್ಚೇರಿಯ ಸರ್ಕಾರ ಜತೆ ಸಂಪರ್ಕದಲ್ಲಿ ಇದೆ ಎಂದು ಹೇಳಿದ್ದಾರೆ.

ADVERTISEMENT

ನಾನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಗುರುವಾರ ನಾನು ಅವಲೋಕನ ಸಭೆ ನಡೆಸಿದ್ದು, ಈ ರಾಜ್ಯಗಳಿಗೆ ಮುಂಗಡವಾಗಿ ₹1,000 ಕೋಟಿಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಿದ್ದೇವೆ.ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ಕರಾವಳಿ ರಕ್ಷಣಾ ಪಡೆ, ಸೇನೆ, ನೌಕಾದಳ ಮತ್ತು ವಾಯುದಳ ಆಡಳಿತ ಸಂಸ್ಥೆಗಳೊಂದಿಗೆ ಕಾರ್ಯ ನಿರತವಾಗಿದೆ.ಚಂಡಮಾರುತದಿಂದ ತತ್ತರಿಸಿ ಹೋಗಿರುವ ರಾಜ್ಯಗಳ ಜನರೊಂದಿಗೆ ಇಡೀ ದೇಶದ ಜನರು ಮತ್ತು ಕೇಂದ್ರಸರ್ಕಾರ ಇದೆ ಎಂದು ಮೋದಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.