ಚಂಡೀಗಢ: ಸಂಗ್ರೂರ್ ಜಿಲ್ಲೆಯಲ್ಲಿ ನಡೆದ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್ ಟ್ರಾಲಿ ಹರಿದು ರೈತನೊಬ್ಬ ಮೃತಪಟ್ಟಿದ್ದು ಕನಿಷ್ಠ ಐವರು ಪೊಲೀಸರು ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಜಿಲ್ಲೆಯ ಲಾಂಗೋವಾಲ್ ಪ್ರದೇಶದಲ್ಲಿ ‘ಭೂಮಿ ಉಳಿಸಿ’ ಅಭಿಯಾನದಡಿ ಪ್ರವಾಹದಿಂದ ಉಂಟಾದ ನಷ್ಟಕ್ಕೆ ಪರಿಹಾರ ಕೇಳಲು 16ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದವು.
ಮೃತ ರೈತನನ್ನು ಲಾಂಗೋವಾಲ್ ಪ್ರದೇಶದ ಪ್ರೀತಮ್ ಸಿಂಗ್ ಎಂದು ಗುರುತಿಸಲಾಗಿದೆ
ಪ್ರತಿಭಟನೆ ವೇಳೆ ರೈತರು ರಾಷ್ಟ್ರೀಯ ಹೆದ್ದಾರಿ ಮತ್ತು ಟೋಲ್ ಪ್ಲಾಜಾಗಳಿಗೆ ನಿರ್ಬಂಧ ವಿಧಿಸುವುದನ್ನು ತಡೆಯಲು ಪೊಲೀಸರು ಯತ್ನಿಸಿದ್ದರು. ಆದರೂ ಬ್ಯಾರಿಕೇಡ್‌ಗಳ ಮೇಲೆಯೇ ಟ್ರ್ಯಾಕ್ಟರ್-ಟ್ರಾಲಿಗಳು ಮತ್ತು ಬಸ್‌ಗಳನ್ನು ಚಲಾಯಿಸಿದ್ದಾರೆ. ಇದರಿಂದ ದುರಂತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೆಲವು ಟ್ರ್ಯಾಕ್ಟರ್ ಮತ್ತು ಬಸ್ ಡ್ರೈವರ್‌ಗಳ ಬೇಜಾವಾಬ್ದಾರಿಯಿಂದಾಗಿ ಈ ಘಟನೆ ನಡೆದಿದೆ. ಈಗ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.