ಅಂಬಾಲಾ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ 63 ವರ್ಷದ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಪಂಜಾಬ್‌ನ ಅಂಬಾಲಾದಲ್ಲಿ ನಡೆದಿದೆ.
ಗ್ಯಾನ್ ಸಿಂಗ್ ಮೃತ ರೈತ. ಇವರು ಶುಕ್ರವಾರ ಬೆಳಿಗ್ಗೆ ಎದೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆ ಹತ್ತಿರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅವರು ಬದುಕುಳಿಯಲಿಲ್ಲ ಎಂದೂ ಅವರು ತಿಳಿಸಿದ್ದಾರೆ.
ಗ್ಯಾನ್ ಸಿಂಗ್ ಅವರು ಎರಡು ದಿನಗಳ ಹಿಂದೆ ಗುರುದಾಸ್‌ಪುರ ಎನ್ನುವ ಜಿಲ್ಲೆಯಿಂದ ಶಂಭೂ ಗಡಿಗೆ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.
ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮೋಜ್ದೂರ್ ಮೋರ್ಚಾ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಕಳೆದ ಮಂಗಳವಾರ ರೈತರು ಪ್ರತಿಭಟನೆ ಆರಂಭಿಸಿದ್ದು. ಪಂಜಾಬ್ ಮತ್ತು ಹರಿಯಾಣ ಗಡಿಗಳಾದ ಶಂಭೂ ಮತ್ತು ಕನೌರಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಈಗಾಗಲೇ ಸರ್ಕಾರದೊಂದಿಗೆ ಮೂರು ಸುತ್ತಿನ ಮಾತುಕತೆ ಮುಕ್ತಾಯವಾಗಿದೆ, ಆದರೆ ಯಾವುದೇ ಪರಿಣಾಮವಾಗದ ಕಾರಣ ಭಾನುವಾರ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.