ಎಂಎಸ್‌ಪಿಗೆ ಕಾನೂನಿನ ಖಾತರಿ ನೀಡಿದರೆ ₹21,000 ಕೋಟಿ ಹೆಚ್ಚುವರಿ ಹೊರೆ ಬೀಳುತ್ತದೆ. ಆದರೆ ಇದು ಸರ್ಕಾರದ ಒಟ್ಟು ಬಜೆಟ್‌ನ ಶೇಕಡಾ 0.4ರಷ್ಟು ಮಾತ್ರ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ. ಎಂಎಸ್‌ಪಿಗೆ ಕಾನೂನಿನ ಖಾತರಿ ನೀಡುವುದರಿದ ಕೃಷಿಯಲ್ಲಿ ಹೂಡಿಕೆ ಹೆಚ್ಚಾಗುತ್ತದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಈ ಮೂಲಕ ವಿವಿಧ ಬಗೆಯ ಬೆಳೆಗಳನ್ನು ಬೆಳೆಯುವುದಕ್ಕೆ ರೈತರಿಗೆ ವಿಶ್ವಾಸಮೂಡುತ್ತದೆ ಎಂದವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.