ADVERTISEMENT

ಗಂಗಾ ಉಳಿವಿಗಾಗಿ 109ದಿನ ಉಪವಾಸ ಸತ್ಯಾಗ್ರಹ ನಡೆಸಿದ್ದ ಶ್ರೀಜ್ಞಾನ ಸ್ವಾಮೀಜಿ ನಿಧನ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2018, 11:22 IST
Last Updated 11 ಅಕ್ಟೋಬರ್ 2018, 11:22 IST
   

ನವದೆಹಲಿ: ಗಂಗಾ ನದಿ ಉಳಿವಿಗಾಗಿ ಸತತ 109 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಶ್ರೀಜ್ಞಾನ ಸ್ವರೂಪ ಸಾನಂದ ಸ್ವಾಮೀಜಿ(ಜಿ. ಡಿ. ಅಗರ್ವಾಲ್‌), ಹೃಷಿಕೇಶದಲ್ಲಿರುವಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಎಐಐಎಂಎಸ್‌) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಸ್ವಾಮೀಜಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಖಚಿತಪಡಿಸಿದ್ದಾರೆ.ಐಐಟಿ ಕಾನ್ಪುರದಲ್ಲಿ ಪ್ರೊಫೆಸರ್‌ ಆಗಿ ಕಾರ್ಯನಿರ್ವಹಿಸಿ ಬಳಿಕ ಸನ್ಯಾಸ ಸ್ವೀಕರಿಸಿದ್ದ ಸ್ವಾಮೀಜಿ, ತಮ್ಮ ಬದುಕನ್ನು ನದಿ ರಕ್ಷಣೆ ಹೋರಾಟಕ್ಕೆ ಮುಡಿಪಾಗಿಟ್ಟಿದ್ದರು.

ಇವರ ಪೂರ್ವದ ಹೆಸರುಜಿ. ಡಿ. ಅಗರ್ವಾಲ್‌.ಅವರಿಗೆ 87 ವರ್ಷ ವಯಸ್ಸಾಗಿತ್ತು.

ಬೇಕಾಬಿಟ್ಟಿ ಅಣೆಕಟ್ಟುಗಳನ್ನು ನಿರ್ಮಿಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ಜೂನ್‌ 22ರಿಂದಲೂ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸ್ವಾಮೀಜಿಯ ಆರೋಗ್ಯ ಗಂಭೀರ ಸ್ಥಿತಿ ತಲುಪಿತ್ತು. ಹೀಗಾಗಿ ಅವರನ್ನು ಹೃಷಿಕೇಶದ ಎಐಐಎಂಎಸ್‌ ಆಸ್ಪತ್ರೆಗೆ ಬುಧವಾರ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.