ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಹಾಗೂ ಮಧ್ಯವರ್ತಿಗಳ ವಿರುದ್ಧ ಸಿಬಿಐ ರಾಷ್ಟ್ರವ್ಯಾಪಿ ಕಾರ್ಯಾಚರಣೆ ಕೈಗೊಂಡಿದೆ. ವಿದೇಶಿ ದೇಣಿಗಳನ್ನು ಪಡೆಯುವಲ್ಲಿ ನಿಯಮಗಳ ಉಲ್ಲಂಘನೆಗೆ ಅವಕಾಶ ಮಾಡಿಕೊಟ್ಟಿರುವ ಆರೋಪಗಳ ಮೇಲೆ ಕಾರ್ಯಾಚರಣೆ ನಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಿ ದೇಣಿಗೆ (ನಿಯಂತ್ರಣ) ಕಾಯ್ದೆಯ ಉಲ್ಲಂಘನೆಯ ಆರೋಪಗಳಿಗೆ ಸಂಬಂಧಿಸಿದಂತೆ ದೆಹಲಿ, ಚೆನ್ನೈ, ಹೈದರಾಬಾದ್, ಕೊಯಮತ್ತೂರ್, ಮೈಸೂರು ಹಾಗೂ ರಾಜಸ್ಥಾನದ ಒಟ್ಟು 40 ಸ್ಥಳಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಹಾಗೂ ಮಧ್ಯವರ್ತಿಗಳು ವಿದೇಶಿ ದೇಣಿಗೆ ಕಾಯ್ದೆ ಉಲ್ಲಂಘಿಸುವ ಮೂಲಕ ವಿದೇಶದಿಂದ ದೇಣಿಗೆಗೆ ಅನುವು ಮಾಡಿಕೊಡಲು ಹಣ ಪಡೆದಿರುವುದು ಪತ್ತೆಯಾಗಿದೆ.
ಲಂಚ ಪಡೆದಿರುವ ಆರೋಪದ ಮೇಲೆ ಕೇಂದ್ರ ಸರ್ಕಾರದ ಅಧಿಕಾರಿಗಳು ಸೇರಿದಂತೆ ಆರು ಜನರನ್ನು ವಶಕ್ಕೆ ಪಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು ಎರಡು ಕೋಟಿ ರೂಪಾಯಿಯಷ್ಟು ಹಣ ಹವಾಲಾ ಮೂಲಕ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.