ADVERTISEMENT

ಐಐಟಿ ಪ್ರವೇಶ: ಮೀಸಲಾತಿ ವರ್ಗದ ವಿದ್ಯಾರ್ಥಿಗಳ ಶುಲ್ಕದಲ್ಲಿ ರಿಯಾಯಿತಿ

ಪಿಟಿಐ
Published 18 ಅಕ್ಟೋಬರ್ 2024, 16:07 IST
Last Updated 18 ಅಕ್ಟೋಬರ್ 2024, 16:07 IST
ವಿ.ಕಾಮಕೋಟಿ (ಎಡದಿಂದ ಮೂರನೆಯವರು) 
ವಿ.ಕಾಮಕೋಟಿ (ಎಡದಿಂದ ಮೂರನೆಯವರು)    

ನವದೆಹಲಿ: ಮೀಸಲಾತಿ ವರ್ಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಐಐಟಿಗಳಲ್ಲಿ ಪ್ರವೇಶ ಪಡೆಯುವಂತಾಗಲು, ಶುಲ್ಕದಲ್ಲಿ ರಿಯಾಯಿತಿ ಹಾಗೂ ಕಟ್‌ ಆಫ್‌ ಮಿತಿಯನ್ನು ಮತ್ತಷ್ಟು ಕಡಿಮೆ ಮಾಡುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಐಐಟಿಗಳು ನಿರ್ಧರಿಸಿವೆ.

‘ಉನ್ನತ ಶಿಕ್ಷಣವು ಎಲ್ಲರನ್ನೂ ಒಳಗೊಳ್ಳುವಂತಾಗಬೇಕು ಹಾಗೂ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಜೆಇಇ ಆಧಾರದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ, ಅರ್ಜಿ ಸಲ್ಲಿಸುವ ಹಂತದಿಂದಲೇ ಶುಲ್ಕದಲ್ಲಿ ರಿಯಾಯಿತಿ ಮತ್ತು ಶುಲ್ಕ ಮಾಫಿಯಂತಹ ಸೌಲಭ್ಯ ನೀಡಲಾಗಿದೆ’ ಎಂದು ಐಐಟಿ–ಮದ್ರಾಸ್‌ ನಿರ್ದೇಶಕ ವಿ.ಕಾಮಕೋಟಿ ಹೇಳಿದ್ದಾರೆ.

ADVERTISEMENT

‘ಅರ್ಜಿ ಸಲ್ಲಿಸುವ ಹಂತದಲ್ಲಿ, ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಂಗವಿಕಲ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕದ ಅರ್ಧದಷ್ಟು ಮೊತ್ತವನ್ನು ಮಾತ್ರ ಭರಿಸಿದರೆ ಸಾಕು. ಈ ವರ್ಗದ ವಿದ್ಯಾರ್ಥಿಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಐಐಟಿಗಳಲ್ಲಿ ಪ್ರವೇಶ ಪಡೆಯಲಿ ಎಂಬ ಉದ್ದೇಶದಿಂದ ಮತ್ತಷ್ಟು ಸೌಲಭ್ಯಗಳನ್ನು ನೀಡಲಾಗುತ್ತದೆ’ ಎಂದು ಹೇಳಿದ್ದಾರೆ.

ಈ ವರ್ಷ ಐಐಟಿ–ಮದ್ರಾಸ್, ಈ ವರ್ಷದ ಜೆಇಇ–ಅಡ್ಡಾನ್ಸ್ಡ್‌ ಪರೀಕ್ಷೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.