ADVERTISEMENT

ಉಜ್ಜಯಿನಿಯ ಮಹಾಕಾಳ ದೇವಾಲಯದ ಎದುರು ಗೋಡೆ ಕುಸಿದು ಇಬ್ಬರು ಸಾವು

ಪಿಟಿಐ
Published 28 ಸೆಪ್ಟೆಂಬರ್ 2024, 3:14 IST
Last Updated 28 ಸೆಪ್ಟೆಂಬರ್ 2024, 3:14 IST
<div class="paragraphs"><p>ಉಜ್ಜಯಿನಿಯ&nbsp;ಮಹಾಕಾಳ ದೇವಾಲಯದ ಎದುರು ರಕ್ಷಣಾ ಕಾರ್ಯಾಚರಣೆಯ ದೃಶ್ಯ</p></div>

ಉಜ್ಜಯಿನಿಯ ಮಹಾಕಾಳ ದೇವಾಲಯದ ಎದುರು ರಕ್ಷಣಾ ಕಾರ್ಯಾಚರಣೆಯ ದೃಶ್ಯ

   

ಪಿಟಿಐ ಚಿತ್ರ

ಉಜ್ಜಯಿನಿ: ಪ್ರಸಿದ್ಧ ಮಹಾಕಾಳ ದೇವಾಲಯದ ಎದುರಿನ ಶಾಲೆಯ ಕಾಂಪೌಂಡ್ ಭಾರಿ ಮಳೆಯಿಂದಾಗಿ ಕುಸಿದು ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿರುವ ದುರಂತ ಶುಕ್ರವಾರ ಸಂಜೆ ಸಂಭವಿಸಿದೆ.

ADVERTISEMENT

'ಮಹಾರಾಜವಾಡ ಶಾಲೆಯ ಕಾಂಪೌಂಡ್‌ನ ಒಂದು ಭಾಗ ಕುಸಿದಿದ್ದು, ನಾಲ್ವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು. ತಕ್ಷಣವೇ ಕಾರ್ಯಾಚರಣೆ ನಡೆಸಿ, ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಲಾಯಿತು' ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ನೀರಜ್‌ ಕುಮಾರ್‌ ಸಿಂಗ್ ತಿಳಿಸಿದ್ದಾರೆ.

'ಸಂತ್ರಸ್ತರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬದುಕುಳಿದಿರುವ ಇನ್ನಿಬ್ಬರನ್ನು ಹೆಚ್ಚಿನ ಚಿಕಿತ್ಸೆ ಸಲುವಾಗಿ ಇಂದೋರ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ' ಎಂದು ಮಾಹಿತಿ ನೀಡಿದ್ದಾರೆ.

ಮುಂದುವರಿದು, 'ಮೃತರ ಕುಟುಂಬದವರಿಗೆ ತಲಾ ₹ 4 ಲಕ್ಷ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ಸಲುವಾಗಿ ತಲಾ ₹ 50,000 ನೆರವು ಘೊಷಿಸಲಾಗಿದೆ' ಎಂದೂ ತಿಳಿಸಿದ್ದಾರೆ.

ಮೃತರನ್ನು ಫರ್ಹೀನ್‌ (22), ಅಜಯ್‌ ಯೋಗಿ (27) ಎಂದು ಗುರುತಿಸಿರುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.