ADVERTISEMENT

ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸಾಧ್ಯತೆ: ಹಲವೆಡೆ ಎನ್‌ಡಿಆರ್‌ಎಫ್‌ ತಂಡ ನಿಯೋಜನೆ

ಪಿಟಿಐ
Published 10 ಜೂನ್ 2021, 6:34 IST
Last Updated 10 ಜೂನ್ 2021, 6:34 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ‘ಮಹಾರಾಷ್ಟ್ರದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಹಲವು ಭಾಗಗಳಲ್ಲಿ 15 ಎನ್‌ಡಿಆರ್‌ಎಫ್‌ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ಎನ್‌ಡಿಆರ್‌ಎಫ್‌ನ ಮುಖ್ಯಸ್ಥರು ಗುರುವಾರ ತಿಳಿಸಿದರು.

‘ರತ್ನಗಿರಿಯಲ್ಲಿ ನಾಲ್ಕು ತಂಡಗಳು, ಮುಂಬೈ, ಸಿಂಧುದುರ್ಗ, ಪಾಲ್ಘರ್ , ರಾಯಗಡ, ಠಾಣೆಯಲ್ಲಿ ತಲಾ ಎರಡು ಮತ್ತು ಕುರ್ಲಾದಲ್ಲಿ ಒಂದು ತಂಡವನ್ನು ನಿಯೋಜನೆ ಮಾಡಲಾಗಿದೆ’ ಎಂದು ಎನ್‌ಡಿಆರ್‌ಎಫ್‌ ಮಹಾನಿರ್ದೇಶಕ ಎಸ್.ಎನ್ ಪ್ರಧಾನ್ ಟ್ವೀಟ್ ಮಾಡಿದ್ದಾರೆ.

‘ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿತ್ತು. ರಾಜ್ಯ ಸರ್ಕಾರದ ಮನವಿ ಮೇರೆಗೆ ವಿವಿಧ ಸ್ದಳಗಳಲ್ಲಿ ತಂಡಗಳನ್ನು ನಿಯೋಜಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಹವಾಮಾನ ಇಲಾಖೆಯು ಮುಂಬೈ, ಪಾಲ್ಘರ್, ರಾಯಗಡ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಿದೆ.

ನೈರುತ್ಯ ಮುಂಗಾರು ಬುಧವಾರ ಮುಂಬೈ ಮತ್ತು ಉಪನಗರಕ್ಕೆ ಆಗಮಿಸಿದ್ದು, ಹಲವೆಡೆ ಭಾರಿ ಮಳೆಯಿಂದಾಗಿ ರಸ್ತೆ ಮತ್ತು ರೈಲ್ವೆ ಹಳಿಗಳು ಜಲಾವೃತವಾಗಿದ್ದವು. ಅಲ್ಲದೆ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.