ನವದೆಹಲಿ: ಟೋಪಿಸಂಬಂಧ ಜಗಳ ನಡೆದು 19 ವರ್ಷದ ಯುವಕನನ್ನು ಅಪ್ರಾಪ್ತರು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ದೆಹಲಿಯ ಶಾಹ್‌ದಾರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕೈಲಾಶ್ ನಗರ ಪ್ರದೇಶಲ್ಲಿ ಶನಿವಾರ ಘಟನೆ ನಡೆದಿದೆ. ಗುಂಡಿನ ದಾಳಿ ಬಗ್ಗೆ ಗಾಂಧಿನಗರ ಪೊಲೀಸ್ ಠಾಣೆಗೆ ಮಾಹಿತಿ ಬಂದಿದ್ದು, ಕೂಡಲೇ ತಂಡವೊಂದು ಸ್ಥಳಕ್ಕೆ ದೌಡಾಯಿಸಿದೆ. ಸುಫಿಯಾನ್ ಕೊಲೆಯಾದ ವ್ಯಕ್ತಿ.
ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಟೋಪಿಯ ವಿಚಾರ ಸಂಬಂಧ ಸುಫಿಯಾನ್ ಹಾಗೂ ಆರೋಪಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಸುಫಿಯಾನ್ ಬಾಲಕರಿಗೆ ಹೊಡೆದಿದ್ದಾರೆ. ಬಳಿಕ ಅವರು ಸುಫಿಯಾನ್ ಕೊಲೆಗೆ ಸಂಚು ರೂಪಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೂವರನ್ನು ಗಾಜಿಯಾಬಾದ್‌ನ ವಿವಿಧ ಪ್ರದೇಶಗಳಿಂದ ಬಂಧಿಸಲಾಗಿದ್ದು, ಅವರಿಂದ ನಾಡ ಪಿಸ್ತೂಲು ಹಾಗೂ ಸ್ಕೂಟರ್ ಒಂದನ್ನು ವಶಕ್ಕೆ ಪಡೆಯಲಾಗಿದೆ.
ಮತ್ತೋರ್ವ ಆರೋಪಿ ಹಾಗೂ ಆಯುಧ ನೀಡಲು ಸಹಾಯ ಮಾಡಿದ ಆರೋಪಿಗಳಲ್ಲಿ ಒಬ್ಬರ ತಾಯಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.